Latest
ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




