Kannada NewsKarnataka NewsLatest

*ತಾಲೂಕು ಪಂಚಾಯತ್ EO ವೆಂಕಟೇಶ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಪಂಚಾಯತ್ ಇಒ ವೆಂಕಟೇಶ್ ಅವರನ್ನು ಅಮಾನತು ಮಾಡಲಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.24ರಂದು ಇಒ ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅದಿಕಾರಿಗಳು ದಾಳಿ ನಡೆಸಿದ್ದರು.

Home add -Advt

ವೆಂಕಟೇಶ್ ಅವರಿಗೆ ಸೇರಿದ 5 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಆದಾಯ ಮೀರಿ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಆರೋಪಿ ಸದರಿ ಹುದ್ದೆಯಲ್ಲಿದ್ದರೆ ಸುಗಮ ತನಿಖೆಗೆ ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ಆರೋಪಿ ಇಒ ವೆಂಕಟೇಶ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

Related Articles

Back to top button