Kannada NewsLatest

ಬೆಳಗಾವಿಯಲ್ಲೂ ಸಾರಿಗೆ ನೌಕರರ ಧರಣಿ; ಬಸ್ ಸಂಚಾರ ಸ್ತಬ್ಧ

Home add -Advt

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕೂಡ ಬಸ್ ಸಂಚಾರ ಸ್ತಬ್ಧಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಇದೇ ವೇಳೆ ಪರಿಷಿಷ್ಟ ವರ್ಗಗಳ ವಾಲ್ಮಿಕಿ ಸಾರಿಗೆ ನೌಕರರ ಸಂಘದ ರಾಜ್ಯ ಘಟಕ ಹಾಗೂ ಚಾಲಕ ನಿರ್ವಾಹಕರು ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕೇಂದ್ರ ಬಸ್ ನಿಲ್ದಾಣದಲ್ಲಿ ಮುಂಜಾನೆಯಿಂದಲೇ ಧರಣಿ ಆರಂಭಿಸಲಾಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ 1.30 ಲಕ್ಷ ನೌಕರರು ದುಡಿಯುತ್ತಿದ್ದು, ಇವರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ಮುಷ್ಕರ ನಡೆಸಲಾಗುತ್ತಿದೆ.

 

Related Articles

Back to top button