Karnataka News

*ಹಬ್ಬದ ದಿನವೇ ಮತ್ತೊಂದು ದುರಂತ: ಭೀಕರ ಅಪಘಾತದಲ್ಲಿ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಬಳಿ ನಡೆದಿದೆ.

ಆಟೋ ಚಾಲಕ ರಾಘವೇಂದ್ರ (45) ಹಾಗೂ ಪ್ರಯಾಣಿಕರಾದ ಮಾಲತಿ (35) ಮೃತರು. ಮಾಲತಿ ಹಾಗೂ ಕುಟುಂಬದವರು ಆಟೋದಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆಟೋ ಚಾಲಕ ಹಾಗೂ ಮಾಲತಿ ಮೃತಪಟ್ಟಿದ್ದಾರೆ. ಮಾಲತಿ ಪತಿ ಹಾಗೂ ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ.

Home add -Advt

ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.


Related Articles

Back to top button