Karnataka NewsLatestSports

*ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನೋಟಿಸ್*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಡಿಎನ್ ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

Home add -Advt

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ ಆರ್ ಸಿಬಿ, ಡಿಎನ್ ಎ ಕಂಪನಿ ಹಾಗೂ ಕೆ ಎಸ್ ಸಿಎಗೆ ನೋಟಿಸ್ ಜಾರಿ ಮಾಡಿದೆ. ಇನ್ನು ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕೋರ್ಟ್ ಗೆ ವರದಿ ಸಲ್ಲಿಸಿದೆ.

ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂನ್ 23ಕ್ಕೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ.


Related Articles

Back to top button