
ಪ್ರಗತಿವಾಹಿನಿ ಸುದ್ದಿ: ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಯುವಕನೊಬ್ಬ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿರುವ ಘಟನೆ ಗೋರಖ್ ಪುರ ರೈಲು ನಿಲ್ದಾಣದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ಕೊಪ್ಪಳ ಮೂಲದ ಯುವಕ ಗೋರಖ್ ಪುರ ರೈಲು ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ಪ್ರವೀಣ್ ಹೊಸಮನಿ (27) ಮೃತ ದುರ್ದೈವಿ. 15 ದಿನಗಳ ಹಿಂದೆ ಮಹಾಕುಂಭಮೇಳಕ್ಕೆ ತೆರಳಿದ್ದ ಪ್ರವೀಣ್, ಬಳಿಕ ಪ್ರಯಾಗ್ ರಾಜ್ ನಿಂದ ಅಯೋಧ್ಯೆಗೆ ತೆರಳುತ್ತಿದ್ದರು. ಈ ವೇಲೆ ಗೋರಖ್ ಪುರ ರೈಲು ನಿಲ್ದಾಣದಲ್ಲಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.




