Latest

ಸಿಎಂ ಯಡಿಯೂರಪ್ಪ ಭ್ರಷ್ಟಾಚಾರ ದಾಖಲೆ ಶೀಘ್ರ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಿಎಂ ಬಿ.ಎಸ್.ಯಡಿಯೂರಪ್ಪನವರ ಭ್ರಷ್ಟಾಚಾರದ ಬ್ರಹ್ಮಾಸ್ತ್ರವೇ ನನ್ನ ಬಳಿ ಇದೆ. ಶೀಘ್ರದಲ್ಲಿ ದಾಖಲೆ ಸಮೇತ ಬಿಡುಗಡೆ ಮಾಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಯತ್ನಾಳ್, ರಾಜ್ಯಕ್ಕೆ ಒಳಿತಾಗಲಿ ಎಂದು ನಾನು ಹೋರಾಡುತ್ತಿದ್ದೇನೆ. ದಾಖಲೆ ಬಿಡುಗಡೆಯಾದರೆ ಬಿ ಎಸ್ ವೈ ಪರ ಬ್ಯಾಟ್ ಮಾಡುತ್ತಿರುವ ಮಠಾಧೀಶರು ಮಠ ಬಿಟ್ಟು ಓಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಕುರುಕ್ಷೇತ್ರದ ಅಭಿಮನ್ಯುವಲ್ಲ ನಾನು ಅರ್ಜುನನಾಗುತ್ತೇನೆ. ಈಗ ವನವಾಸ, ಅಜ್ನಾತವಾಸ ಎಲ್ಲವೂ ಮುಗಿದಿದೆ. ಇನ್ನೇನಿದ್ದರೂ ಪಟ್ಟಾಭಿಷೇಕ ಮಾಡಿಸುವ ಕೆಲಸ ಮಾತ್ರ ಬಾಕಿಯಿದೆ. ನಾಯಕತ್ವ ಬದಲಾವಣೆಯಾಗುವ ವಿಶ್ವಾಸವಿದೆ ಎಂದರು.

ನಾನು ಏಕಾಂಗಿಯಲ್ಲ, ಸಾಕಷ್ಟು ಸಚಿವರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲರೂ ನನ್ನ ಹೋರಾಟ ನ್ಯಾಯುತವಾಗಿದೆ, ಹೋರಾಟ ಮುಂದುವರೆಸಿ ಎಂದಿದ್ದಾರೆ. ಕೆಲವೆ ದಿನಗಳಲ್ಲಿ ನನ್ನ ಹೋರಾಟಕ್ಕೆ ಫಲ ಸಿಗಲಿದೆ. ಬಾಯಿಮಾತಿನಲ್ಲಿ ನಾನು ಹೇಳಿಕೆ ನೀಡುತ್ತೇನೆ ಎಂದು ಹೇಳುವವರಿಗೆ ದಾಖಲೆ ಮೂಲಕವೇ ಉತ್ತರ ಕೊಡುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಮಹತ್ವದ ವಿದ್ಯಮಾನ

Home add -Advt

Related Articles

Back to top button