Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಘೋರ ಘಟನೆ: ASI ಹೃದಯಾಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ಲಕ್ಷ್ಮೀದೇವಿ ಜಾತ್ರೆ ಬಂದೋಬಸ್ತ್ ಗೆ ಬಂದಿದ್ದ ಎಎಸ್ ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್ ಪಟ್ಟಣದಲ್ಲಿ ಲಕ್ಷ್ಮೀದೇವಿ ಜಾತ್ರೆ ನಡೆಯುತ್ತಿದ್ದು, ಬಂದೋಬಸ್ತ್ ಗೆ ನೇಮಕಗೊಂಡಿದ್ದ ಎ ಎಸ್ ಐ ಮೀರಾನಾಯಕ್ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ

ಹುಬ್ಬಳ್ಳಿಯ ಎಪಿಎಂಸಿ ಠಾಣೆಯ ಎಲ್.ಜಿ.ಮೀರಾನಾಯಕ್ ಅವರನ್ನು ಲಕ್ಷ್ಮೀದೇವಿ ಜಾತ್ರೆಗೆ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿತ್ತು. ಇಂದು ಬೆಳಿಗ್ಗೆ ಗೋಕಾಕ್ ನ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೀರಾನಾಯಕ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಶಿಫ್ಟ್ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button