Latest

*ಮತ್ತೆ ಮುಂಗಾರು ಚುರುಕು: ಇಂದಿನಿಂದ ಭಾರಿ ಮಳೆ; ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂದಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬೆಳಗಾವಿ, ಕಲಬುರ್ಗಿ, ಮೈಸೂರು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಶಿವಮೊಗ್ಗ, ಚಿಕ್ಕಮಗಳೂರು, ಚಿಕಬಳ್ಳಾಪುರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ರಾಯಚೂರು, ವಿಜಯಪುರ, ವಿಜಯನಗರ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button