
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಸರಣಿಯನ್ನು ಮುಂದುವರಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಗಣೇಶಪುರದ ಜ್ಯೋತಿ ನಗರದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣ, ಒಳಚರಂಡಿ, ಪೆವರ್ಸ್ ಅಳವಡಿಕೆ, ಸ್ಮಶಾನದ ಶೆಡ್ಡ್ ಹಾಗೂ ಕಾಂಪೌಂಡ್ ಗೋಡೆಗಳ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.