Kannada NewsKarnataka NewsLatest

*ಅಟ್ಟಿಕಾ ಗೋಲ್ಡ್ ಕಂಪನಿಗೆ ಮತ್ತೊಂದು ಶಾಕ್: ಇಡಿ ಬಳಿಕ IT ದಾಳಿ*

ಪ್ರಗತಿವಾಹಿನಿ ಸುದ್ದಿ: ಅಟ್ಟಿಕಾ ಗೋಲ್ಡ್‌ ಕಂಪನಿ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ಬೆನ್ನಲ್ಲೇ ಇದೀಗ ಆದಾಯ ತೆರಿಗೆ (IT) ಇಲಾಖೆ ದಾಳಿ ನಡೆಸಿದೆ.

ಅಟ್ಟಿಕಾ ಗೋಲ್ಡ್‌ನ 19 ಪ್ರದೇಶದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿಯಷ್ಟೇ ಇಡಿ ದಾಳಿ ಮುಕ್ತಾಯಗೊಳಿಸಿತ್ತು. ಅದರ ಬೆನ್ನಲ್ಲೇ ಇಂದು ಬೆಳ್ಳಂ ಬೆಳಿಗ್ಗೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಕ್ರಮವಾಗಿ ಚಿನ್ನ ಸಾಗಣೆ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್‌ ಕಂಪನಿ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button