Karnataka NewsLatestNational

*ದೇಶಾದ್ಯಂತ ಮೆಡಿಕಲ್ ಶಾಪ್ ಗಳು ಬಂದ್: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಆರಂಭಿಸಿದ ಔಷಧಿ ಅಂಗಡಿ ಮಾಲೀಕರು*

ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ನಲ್ಲಿ ಔಷಧಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ದೇಶಾದ್ಯಂತ ಇಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಮೆಡಿಕಲ್ ಶಾಪ್ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್ಲೈನ್ ಔಷಧ ಮಾರಾಟ, ಆನ್​ಲೈನ್ ಮೂಲಕ ಔಷಧಗಳಿಗೆ ಭಾರಿ ರಿಯಾಯಿತಿ ನೀಡುವುದದನ್ನು ಖಂಡಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮೆಡಿಕಲ್ ಶಾಪ್ ಗಳನ್ನು ಬಂದ್ ಮಾಡಿ ಮುಷ್ಕರ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಔಷಧ ವ್ಯಾಪಾರಿಗಳು ಮೆಡಿಕಲ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಡ್ ಪ್ಲಸ್, ಅಪೋಲೋ ಫಾರ್ಮಸಿ, ಆಸ್ಪತ್ರೆಗಳಲ್ಲಿನ ಮೆಡಿಕಲ್ ಶಾಪ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ಮೆಡಿಕಲ್ ಶಾಪ್ ಗಳು ಬಹುತೇಕ ಬಂದ್ ಆಗಿವೆ. ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿ ಒಇಉಷಧ ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದು, ಮೆಡಿಕಲ್ ಶಾಪ್ ವ್ಯಾಪಾರಿಗಳು, ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಬೆಳಗ್ಗೆ 11:00 ಗಂಟೆಗೆ ಡಿ ಸಿ ಕಚೇರಿ ಎದುರು ಪ್ರತಿಭಟನೆಗೆ ವ್ಯಾಪಾರಿಗಳು ಮುಂದಾಗಿದ್ದಾರೆ. ಗದಗದಲ್ಲಿ ಬೆಳಿಗ್ಗೆಯಿಂದಲೇ ಔಷಧ ಅಂಗಡಿಗಳು ಬಂದ್ ಆಗಿದ್ದು, ಸಂಜೆವರೆಗೆ ಮೆಡಿಕಲ್ ಓಪನ್ ಇರುವುದಿಲ್ಲ ಎಂದು ವ್ಯಾಪಾರುಗಳು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button