LatestNationalPolitics

*ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ರೈಲಿನ ಸಿ4 ಕೋಚ್ ಗೆ ಹಾನಿಯಾಗಿದೆ. ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ.

ಲಕ್ನೌ೦ದೆಹಲಿ ವಂದೇ ಭಾರತ್ ಎಕ್ಸ್ ಪ್ರೆಸ್ ನಲ್ಲಿ ಭಾಗವತ್ ಮೀರತ್ ಗೆ ತೆರಳುತ್ತಿದ್ದರು. ಈ ವೇಳೆ ಹರ್ದೋಯ್ ಬಳಿ ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ.
ಮುಂಜಾನೆ 3:20 ರ ಸುಮಾರಿಗೆ ಕಾಡಾ ಗ್ರಾಮದಲ್ಲಿ ರೈಲು ಬರುತ್ತಿದಂತೆ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ರೈಲಿನ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button