Karnataka NewsLatest

*ರಾಜ್ಯದಲ್ಲಿ ಮಹಾಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ವರುಣಾರ್ಭಟಕ್ಕೆ ಈಗಾಗಲೇ ನಲುಗಿ ಹೋಗಿವೆ. ಈ ನಡುವೆ ರಾಜ್ಯದಲ್ಲಿ ಆಗಸ್ಟ್ 3ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಆಗಸ್ಟ್ 3ರವರೆಗೆ ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ.

Home add -Advt

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 1ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಹಾಗೂ ಆಗಸ್ಟ್ 1ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಹಾಗೂ ಆಗಸ್ಟ್ 2, 3 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 1ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿಯಲ್ಲಿ ಇಂದು, ನಾಳೆ, ಆಗಸ್ಟ್ 1, 2ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಆಗಸ್ಟ್ 3ರವರೆಗೂ ಮಳೆಯಗಾಲಿದೆ. ಇನ್ನು ರಾಜ್ಯಾದ್ಯಂತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದ್ದಾರೆ.

Related Articles

Back to top button