CrimeKannada NewsKarnataka NewsLatest

*ಹಳಿ ದಾಟುತ್ತಿದ್ದಾಗ ಭೀಕರ ದುರಂತ: ರೈಲು ಡಿಕ್ಕಿಯಾಗಿ ಮಹಿಳೆ ಹಾಗೂ ಇಬ್ಬರು ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರೈಲು ಡಿಕ್ಕಿಯಾಗಿ ಓರ್ವ ಮಹಿಳೆ, ಇಬ್ಬರು ಮಕ್ಕಳು ಸೇರಿ ಮೂವರು ಸವನ್ನಪ್ಪಿರುವ ಘೋರ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ಇರ್ಫಾನಾ (46), ರುಕಿಯಾ (13) ಹಾಗೂ ರಾಕಿಯಾ (8) ಮೃತ ದುರ್ದೈವಿಗಳು. ಹಳಿ ದಾಟುತ್ತಿದ್ದಾಗ ಏಕಾಏಕಿ ರೈಲು ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರ ಮೃತದೇಹ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ರಜೆ ಇದೆ ಎಂದು ಮೊಮ್ಮಕ್ಕಳು ಹಿಂದೂಪುರದಿಂದ ಅಜ್ಜಿಯ ಮನೆಗೆ ಬಂದಿದ್ದರು. ರಜೆ ಮುಗಿಸಿ ಊರಿಗೆ ತೆರಳುವಾಗ ಈ ದುರಂತ ಸಂಭವಿಸಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button