Kannada NewsKarnataka NewsLatest

*ಪಾಕಿಸ್ತಾನ ಪರ ಘೋಷಣೆ; ಬಿಜೆಪಿ ಕಾರ್ಯಕರ್ತ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಎರಡು ವರ್ಷಗಳ ಹಿಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ವೇಳೆ ಪಾಕಿಸ್ತಾನ ಜಿಮ್ದಾಬಾದ್ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತನನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಣಾಯಕನಪುರ ರವಿ ಬಂಧಿತ ಬಿಜೆಪಿ ಕಾರ್ಯಕರ್ತ. 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನ ವಿದೇಶಾಂಗ ಸಚಿವ ಅವಹೇಳನಕಾರಿ ಮಾತನಾಡಿದ್ದನ್ನು ಖಂಡಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪಾಕಿಸ್ತಾನ ವಿರುದ್ಧ ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ತಕ್ಷಣ ಅವರ ಬಾಯಿ ಮುಚ್ಚಲಾಗಿತ್ತು. ಈಗ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಮೂವರನ್ನು ಪೊಲೀಸರು ಬಂಧಿಸಿರುವ ಬೆನ್ನಲ್ಲೇ ಅತ್ತ ಮಂಡ್ಯದಲ್ಲಿಯೂ ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಲಾಗಿದೆ.

Home add -Advt

ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್, ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಿದ್ದಾರೆ.

Related Articles

Back to top button