Kannada NewsKarnataka NewsLatest

*ಹಿರಿಯ ನಾಗರಿಕರನ್ನು ಅನಾಥರನ್ನಾಗಿಸುವ ಮುನ್ನ ಇರಲಿ ಎಚ್ಚರ*: *ರಾಜ್ಯದಲ್ಲಿ ಕಠಿಣ ಕಾನೂನು ಜಾರಿ*

ಪ್ರಗತಿವಾಹಿನಿ ಸುದ್ದಿ: ಹಿರಿಯ ನಾಗರಿಕರನ್ನು ನಿರ್ಲಕ್ಷ್ಯ ಮಾಡಿ ಅನಾಥರನ್ನಾಗಿ ಮಾಅಡುವ ಮುನ್ನ ಜನರಲ್ಲಿ ಎಚ್ಚರಿಕೆ ಇರಲಿ. ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಹಾಗೂ ನಿರ್ಲಕ್ಷ ತಪ್ಪಿಸಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ಸಿದ್ಧಪಡಿಸಿದೆ.

ಕರ್ನಾಟಕ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಮತ್ತು ನಿರ್ಲಕ್ಷ್ಯ ತಡೆ ಹಾಗೂ ರಕ್ಷಣಾ ಮಸೂದೆ-2025ರ ಕರಡನ್ನು ಪರಿಶೀಲಿಸಿರುವ 12 ಸದಸ್ಯರ ತಜ್ಞರ ಸಮಿತಿಯ, ಹಿರಿಯ ನಾಗರಿಕರನ್ನು ತ್ಯಜಿಸುವುದನ್ನು ಜಾಮೀನು ಸಿಗದ ಅಪರಾಧವನ್ನಾಗಿ ಪರಿಗಣಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವಂತೆಯೂ ಶಿಫಾರಸು ಮಾಡಿದೆ.

ಹಿರಿಯ ನಾಗರಿಕರನ್ನು ಅನಾಥವಾಗಿಸುವ ಪ್ರಕರಣಗಳಲ್ಲಿ 2 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಪ್ರಸ್ತುತ, ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಲ್ಯಾಣ ನಿಯಮಗಳು ಕೇಂದ್ರದ ಅಸ್ತಿತ್ವದಲ್ಲಿರುವ ಕಾನೂನನ್ನು ಜಾರಿಗೊಳಿಸುತ್ತಿವೆ. ಹಿರಿಯ ನಾಗರಿಕರ ರಕ್ಷಣೆಗಾಗಿ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ಇಲ್ಲ. ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಗಳ ಪ್ರಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಮತ್ತು ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ 12 ಸದಸ್ಯರ ತಜ್ಞರ ಸಮಿತಿಯು ಈಗಾಗಲೇ ತನ್ನ ಶಿಫಾರಸುಗಳನ್ನು ಸಲ್ಲಿಸಿದೆ.

ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಮತ್ತು ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಮಗ್ರವಾಗಿ ಒಳಗೊಂಡಿರುವುದು ಈ ಮಸೂದೆಯ ಉದ್ದೇಶವಾಗಿದೆ. ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಮತ್ತು ನಿರ್ಲಕ್ಷ್ಯಕ್ಕೆ ಶಿಕ್ಷೆ, ಆರೈಕೆ ಸಂಸ್ಥೆಗಳಲ್ಲಿ ದೂರುಗಳ ಪರಿಹಾರ ವ್ಯವಸ್ಥೆ ಹಾಗೂ ತಂತ್ರಜ್ಞಾನದ ಬಳಕೆ ಸೇರಿದಂತೆ ಪ್ರಸ್ತುತ ನಿಯಮಗಳಲ್ಲಿ ಇಲ್ಲದ ಹಲವು ಅಂಶಗಳನ್ನು ಕರಡು ಮಸೂದೆ ಒಳಗೊಂಡಿದೆ. ಮಸೂದೆಯನ್ನು 2027ರ ಜೂನ್ ಅಥವಾ ಜುಲೈನಲ್ಲಿ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Related Articles

Back to top button