Kannada NewsKarnataka NewsLatestPolitics

*BREAKING: ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ ಸಾದಿಕ್ ಪೈಲ್ವಾನ್*

Home add -Advt

ಪ್ರಗತಿವಾಹಿನಿ ಸುದ್ದಿ: ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ್ದರಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದ ಮುಸ್ಲಿಂ ಮುಖಂಡರು ಸಾದಿಕ್ ಪೈಲ್ವಾನ್ ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು. ಟಿಕೆಟ್ ಕೈತಪ್ಪುತ್ತಿದ್ದಂತೆ ಸಾದಿಕ್ ಪೈಲ್ವಾಅನ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಸಾಅದಿಕ್ ಪೈಲ್ವಾನ್ ಅವರಿಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಸಾದಿಕ್ ಮನವೊಲಿಕೆ ಮಾಡಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಅತನಾಡಿದ ಸಾದಿಕ್ ಪೈಲ್ವಾನ್, ಬಂಡಾಯ ಸ್ಪರ್ಧೆಯಿಂದ ನಾನು ನಿವೃತ್ತಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಖಂಡಿತವಾಗಿಯೂ ಅಲ್ಪಸಂಖ್ಯಾತರು, ಅಹಿಂದ ವರ್ಗದ ಜನ ಭುಜಕ್ಕೆ ಭುಜ ಕೊಟ್ಟು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪುತ್ರ ಸಮರ್ಥ್ ಶಾಮನೂರು ಅವರನ್ನು ಗೆಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ನಾನು ಕಾಂಗ್ರೆಸ್ ನವನೇ. ನನ್ನ ಮನೆಗೆ ಬಂದಿದ್ದೇನೆ. ಮನೆಯಲ್ಲಿ ಅಣ್ಣ-ತಮ್ಮಂದಿರ ಮಧ್ಯೆ ಜಗಳವಾದರೆ ಹಿರಿಯರು ಬಗೆಹರಿಸುತ್ತಾರೆ. ಹಾಗೇ ಹಿರಿಯ ನಾಯಕರು ಎಲ್ಲವನ್ನೂ ಬಗೆಹರಿಸಿದ್ದಾರೆ. ಒಗ್ಗಟ್ಟಿನಿಂದ ಉಪಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರ ಪರವಾಗಿ ಚುನಾವಣೆ ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದರು. ಸಂಧಾನದ ಜವಾಬ್ದಾರಿ ಹೊತ್ತಿದ್ದ ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.


Related Articles

Back to top button