Kannada NewsKarnataka NewsLatestPolitics
*ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಇಂದು ಬೆಳಗಿನ ಜಾವ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಯುರೋಪ್ ಪ್ರವಾಸದಿಂದ ವಾಪಸ್ ಆಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಏಕಾಏಕಿ ತೀವ್ರ ಜ್ವರದಿಂದ ಬಳಲುತ್ತಿರುವ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.




