Latest

ಮಾಜಿ ಶಿಕ್ಷಣ ಸಚಿವ, ಹಿರಿಯ ರಾಜಕಾರಣಿ ಎಂ.ರಘುಪತಿ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಹಿರಿಯ ರಾಜಕಾರಣಿ ಎಂ.ರಘುಪತಿ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಎಂ.ರಘುಪತಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದಲ್ಲಿ ಮಾಜಿ ಸಚಿವ ಎಂ.ರಘುಪತಿ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ.

ಮಲ್ಲೇಶ್ವರಂ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದ ಎಂ.ರಘುಪತಿ ಅವರು ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ತೀರ್ಥ ಯಾತ್ರೆಗೆ ತೆರಳಿದ್ದ ಬಸ್ ಅಪಘಾತ; 9 ಜನರ ದುರ್ಮರಣ

Related Articles

Back to top button