Latest

ದಲಿತರ ಆತಿಥ್ಯ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಹೊಸಪೇಟೆ: ಇಲ್ಲಿನ ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ದಲಿತರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಉಪಾಹಾರ ಸೇವಿಸಿದರು.

ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಅವರ ಪುತ್ರಿಯರಾದ ಹುಲಿಗೆಮ್ಮ ಹಾಗೂ ರೇಣುಕಾ ಬಹು ಉತ್ಸಾಹದಿಂದ ಕೇಸರಿಬಾತ್, ಮಂಡಕ್ಕಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟು ತಯಾರಿಸಿ  ಪೂರೈಸಿದರು. 

ಬೆಳಗಿನಜಾವದಿಂದಲೇ ಮುಖ್ಯಮಂತ್ರಿಗಾಗಿ ಉಪಾಹಾರ ತಯಾರಿಕೆಯ ಸಿದ್ಧತೆಗಳು ನಡೆದಿದ್ದವು. ಇಡೀ ಕುಟುಂಬವಷ್ಟೇ ಅಲ್ಲದೆ ಈ ಭಾಗದ ದಲಿತ ಸಮುದಾಯದ ಕುಟುಂಬದವರೆಲ್ಲ ಅಲ್ಲಿ ಜಮಾಯಿಸಿ ಮುಖ್ಯಮಂತ್ರಿ ಬರುವಿಕೆಗಾಗಿ ಕಾತುರದಿಂದ ಕಾದು ಕುಳಿತಿದ್ದರು.

Home add -Advt

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಿನ ಉಪಾಹಾರ ಸವಿದು ಕೊಲ್ಲಾರಪ್ಪ ಕುಟುಂಬದ ಕುಶಲೋಪರಿ ವಿಚಾರಿಸಿದರು.

ಕೊಲ್ಲಾರಪ್ಪ ನವರ ಮೊಮ್ಮಗಳು ಅಶ್ವಿನಿ ತಡಕಲ್  ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು. ಅವಳ ಶಿಕ್ಷಣ, ಕಾಲೇಜು ವಾತಾವರಣ ಮೊದಲಾದ ಕುರಿತು ಮಾಹಿತಿ ಪಡೆದರು.

ಕಾಲೇಜು ಚೆನ್ನಾಗಿದೆ. ಆದರೆ ಮೆಸ್ ಬಿಲ್ ದುಬಾರಿ ಎಂದು ಆಕೆ ಮುಖ್ಯಮಂತ್ರಿಯವರ ಗಮನ ಸೆಳೆದಾಗ ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ಉಪಾಹಾರ ಸೇವನೆ ನಂತರ ಅವರು ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು.

ವಿಶ್ವಕಪ್ ಪಡೆಯಲು ಟೀಂ ಇಂಡಿಯಾ ತಾಲೀಮು; ಧೋನಿ ಹಳೆ ಕಾರ್ಯತಂತ್ರಕ್ಕೆ ಮೊರೆ ಹೋದ ರೋಹಿತ್

Related Articles

Back to top button