Latest

ಕ್ವಾರಂಟೈನ್ ನಲ್ಲಿದ್ದ ಯುವಕರಿಂದ ಅಟ್ಟಹಾಸ; ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕು ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿದ್ದರೆ, ಇನ್ನೊಂದೆಡೆ ಕ್ವಾರಂಟೈನ್ ಗೆ ಒಳಗಾಗಿರುವ ಕೆಲವರು ಕೂಡ ತಮ್ಮ ಅಟ್ಟಹಾಸ ಮುಂದುವರೆಸಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿದ್ದ ಇಬ್ಬರು ಯುವಕರು ಸೇರಿ 6 ಜನರು 18ವರ್ಷದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ರೋಹ್ತಾಸ್ ಜಿಲ್ಲೆಯ ದಾವತ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬುಧವಾರ ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಗಳಲ್ಲಿ ಚಂಚಲ್ ಮತ್ತು ಸುರೇಶ್ ಎಂಬ ವಲಸೆ ಕಾರ್ಮಿಕರಿಬ್ಬರು ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದರು. ಬುಧವಾರ ರಾತ್ರಿ ಸುಮಾರು 9.30ಕ್ಕೆ ಸಂತ್ರಸ್ತೆ ತಮ್ಮ ಮನೆಯಲ್ಲಿ ಶೌಚಾಲಯವಿಲ್ಲದ ಕಾರಣ ತೋಟಕ್ಕೆ ಹೋಗಿದ್ದಾಳೆ. ಆಗ ಕ್ವಾರಂಟೈನ್ ನಲ್ಲಿದ್ದ ಇಬ್ಬರು ಹುಡುಗಿಯನ್ನು ನೋಡಿ, ಸಂತ್ರಸ್ತೆಯನ್ನು ಬಲವಂತವಾಗಿ ಹಿಡಿದುಕೊಂಡಿದ್ದಾರೆ. ಬಳಿಕ ಗ್ರಾಮದಲ್ಲಿದ್ದ ಇನ್ನೂ ನಾಲ್ವರಿಗೆ ಫೋನ್ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆರು ಮಂದಿ ಸೇರಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ.

ಘಟನೆಯ ನಂತರ ಸಂತ್ರಸ್ತೆ ಮನೆಗೆ ಹೋಗಿ ನಡೆದ ಘಟನೆಯನ್ನು ಕುಟುಂಬದವರ ಬಳಿ ವಿವರಿಸಿದ್ದಾಳೆ. ಆಗ ಕುಟುಂಬವು ಕ್ವಾರಂಟೈನ್ ಕೇಂದ್ರಕ್ಕೆ ಹೋಗಿ ಆರೋಪಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನೆ ನಡೆಸಿದ್ದಾರೆ. ಕ್ವಾರಂಟೈನ್ ನಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದು, ಇನ್ನು ನಾಲ್ವರು ಆರೋಪಿಗಳಾದ ವಿಜಯ್ ಯಾದವ್ (20), ಮುಖೇಶ್ ಯಾದವ್ (21), ಅಮಿತ್ ಪಾಸ್ವಾನ್ (18) ಮತ್ತು ಚುಲ್ಲಿ ಪಾಸ್ವಾನ್ (18) ಅವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Home add -Advt

Related Articles

Back to top button