Karnataka News

*ಪೊಲೀಸ್ ಆಯುಕ್ತ ದಯಾನಂದ ಅಮಾನತ್ತಿಗೆ ಕೆರಳಿದ ಪೊಲೀಸ್ ಒಕ್ಕೂಟ*

ಪ್ರಗತಿವಾಹಿನಿ ಸುದ್ದಿ: ಕಾಲ್ತುಳಿತ ಪ್ರಕರಣದಲ್ಲಿ  ಬೆಂಗಳೂರು ಪೊಲೀಸ್‌ ಆಯುಕ್ತ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆದರೆ ದಯಾನಂದ ಅವರ ಮಾನತ್ತು ಮಾಡಿದಕ್ಕೆ ಪೊಲೀಸ್ ಒಕ್ಕೂಟ ಕೆರಳಿದೆ. 

ಸರ್ಕಾರ ಮಾಡಿದ ತಪ್ಪಿಗೆ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಏಕೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದ್ದು, ಇದೀಗ ಪೊಲೀಸ್ ಒಕ್ಕೂಟ ಕೂಡ ಸರ್ಕಾರವನ್ನು ಪ್ರಶ್ನೆ ಮಾಡುವಂತಾಗಿದೆ. ಭಾರತೀಯ ಪೊಲೀಸ್ ಒಕ್ಕೂಟ, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡಿಯುವಂತೆ ಒತ್ತಾಯಿಸಿದೆ.

ಪ್ರಕರಣದಲ್ಲಿ ಪೊಲೀಸರನ್ನು ಮಾತ್ರ ಹರಕೆಯ ಕುರಿಗಳನ್ನಾಗಿ ಮಾಡಲಾಗಿದೆ ಎಂದು ಆರೋಪಿಸಿರುವ ಒಕ್ಕೂಟ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಪತ್ರದ ಮೂಲಕ ಒತ್ತಾಯಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button