Latest

*ಗುಡುಗು ಸಹಿತ ಧಾರಾಕಾರ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವೆಡೆಗಳಲ್ಲಿ ನಿನ್ನೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಹಾಗು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Home add -Advt

ನಿನ್ನೆ ಬೆಂಗಳೂರಿನ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿತ್ತು. ಇಂದು ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

https://pragati.taskdun.com/d-k-shivakumarfirmandyavidhanasabha-election/


Related Articles

Back to top button