
ಪ್ರಗತಿವಾಹಿನಿ ಸುದ್ದಿ: ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ-ತಾಳಿಕೋಟೆ ಹೆದ್ದಾರಿಯಲ್ಲಿ ನಡೆದಿದೆ. ಬಸವನಹಟ್ಟಿಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಳಗಾವಿ ಮೂಲದ ನಲ್ವರು ಶ್ರೀಶೈಲಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಅಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರಪ್ಪಟಕ್ಕನ್ನವರ್ (70) ಹಾಗೂ ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




