Election NewsKannada NewsKarnataka NewsNationalPolitics
*ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ನೀಡಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸರ್ಕಾರದ ಸಂಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಈ ಖಾತೆಯನ್ನು ಹಂಚಿಕೆ ಮಾಡಿದ್ದಾರೆ. ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಹೆಚ್ಡಿಕೆ ಬರೆದುಕೊಂಡಿದ್ದಾರೆ.
ಇನ್ನೂ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ನಿನ್ನೆಯವರೆಗೆ ಅವರಿಗೆ ಕೃಷಿ ಖಾತೆಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತಿತ್ತು. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರೂ ವಿಶ್ವಾಸ ವ್ಯಕ್ತಪಡಿಸಿದ್ದರು.