Latest

ಸರಕಾರಿ ನೌಕರರ ವೇತನ ಪರಿಷ್ಕರಣೆ; ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿ.ಎಸ್.ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನವನ್ನು ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ವೇತನ ಸಮಿತಿಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಬಿಎಸ್ ವೈ, ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಪರಾಮರ್ಶೆ ಹಾಗೂ ಅನುಷ್ಠಾನಕ್ಕಾಗಿ ನಾಳಿನ ಬಜೆಟ್ ನಲ್ಲಿ ಅಧಿಕಾರಿಗಳ ವೇತನ ಸಮಿತಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Home add -Advt

ಕೇಂದ್ರ ಸರ್ಕಾರ 2016ರಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿದೆ. ದೇಶದ 28 ರಾಜ್ಯಗಳಲ್ಲಿ ಈಗಾಗಲೇ 25 ರಾಜ್ಯಗಳಲ್ಲಿ ಈ ಮಾದರಿ ಜಾರಿಯಲ್ಲಿದೆ. ದೇಶದ ಜಿಎಸ್ ಡಿಪಿ ಅವಲೋಕಿಸಿದರೆ ರಾಜ್ಯ ಸರ್ಕಾರ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿ ರಾಷ್ಟ್ರದಲ್ಲಿ 6ನೇ ಸ್ಥಾನದಲ್ಲಿದೆ. ಈ ಪ್ರಗತಿಯಲ್ಲಿ ಸರ್ಕಾರಿ ನೌಕರರ ಸೇವೆ ಹಾಗೂ ಅವರ ಪಾತ್ರ ಪ್ರಮುಖವಾಗಿದೆ. ಕೊರೋನಾ ಸಂದರ್ಭದಲ್ಲಿ ಅವರ ಸೇವೆ ಶ್ಲಾಘನೀಯವಾಗಿದೆ ಎಂದು ತಿಳಿಸಿದ್ದಾರೆ.

ಆಭರಣ ಪ್ರಿಯರಿಗೆ ಬಿಗ್ ಶಾಕ್

Related Articles

Back to top button