Latest

ಕೊರೊನಾ 2ನೇ ಅಲೆ; ಒಂದೇ ದಿನದಲ್ಲಿ 40,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೂರು ತಿಂಗಳ ಬಳಿಕ ಮತ್ತೆ ಕೊರೊನಾ ಅಟ್ಟಹಾಸ ಆರಂಭವಾಗಿದ್ದು, 2ನೇ ಅಲೆ ಭೀತಿ ಎದುರಾಗಿದೆ. ದೇಶದಲ್ಲಿ ಒಂದೇ ದಿನದಲ್ಲಿ 40,953 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,15,55,284ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 188 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,59,558 ಕ್ಕೆ ಏರಿಕೆಯಾಗಿದೆ.

Related Articles
Home add -Advt

2,88,394 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,11,07,332 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 23,653 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,20,63,392 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Related Articles

Back to top button