Kannada NewsKarnataka NewsLatest

ನಾಮಪತ್ರ ಸಲ್ಲಿಕೆಗೂ ಮುನ್ನ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಪ್ರಾರ್ಥನೆ

Home add -Advt

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ತಿನ ಚುನಾವಣೆಗೆ ಸ್ಪರ್ಧಿಸಿರುವ ಚನ್ನರಾಜ ಹಟ್ಟಿಹೊಳಿ ಅವರಿಗೆ ಚುನಾವಣೆಯಲ್ಲಿ ಜಯಸಿಗಲಿ ಎಂದು ಪ್ರಾರ್ಥಿಸಿ ನಾಮಪತ್ರ ಸಲ್ಲಿಕೆಗೂ ಮುನ್ನ ಮಂಗಳವಾರ ಮುಂಜಾನೆ ಸುಳೇಬಾವಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ತಾಲೂಕು ಪಂಚಾಯಿ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಚನ್ನರಾಜ ಹಟ್ಟಿಹೊಳಿಗೆ ಮತ ನೀಡಿ ಆರಿಸಿ ತರಬೇಕು ಎಂದು ಲಕ್ಷ್ಮಿ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಪಂಚಾಯಿತಿ ಪ್ರತಿನಿಧಿಗಳಲ್ಲಿ ವಿನಂತಿಸಿದರು.

ಮಂಗಳವಾರ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ: ಹಲವಾರು ಗಣ್ಯರು ಭಾಗಿ

Related Articles

Back to top button