Kannada NewsKarnataka NewsLatestPolitics

*ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಬಂದಿಳಿದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಕಾಂಗ್ರೆಸ್ ನಾಯಕಯರು ಆತ್ಮೀಯವಾಗಿ ಸ್ವಾಗತಿಸಿದರು.

ಬಳಿಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಒಂದೇ ವಾಹನದಲ್ಲಿ ಮಂಡಕಳ್ಳಿ ಏರ್ ಪೋರ್ಟ್ ನಿಂದ ಮಹರಾಜಾ ಕಾಲೇಜು ಮೈದಾನಕ್ಕೆ ತೆರಳಿದರು.

Related Articles

Back to top button