World

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ: *ಪಾಕಿಸ್ತಾನದ 100ಕ್ಕೂ ಹೆಚ್ಚು ಉಗ್ರರು ಬಲಿ*

ಪ್ರಗತಿವಾಹಿನಿ ಸುದ್ದಿ: ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಭಾರತೀಯ ಸೇನೆ ಪ್ರತಿಕಾರ ತೀರಿಸಿಕೊಳ್ಳಲು ಆರಂಭಿಸಿದ್ದು, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ.

ಪಾಕಿಸ್ತಾನದ ಮೇಲೆ ತಡ ರಾತ್ರಿಯಿಂದ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ 100ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.

ಭಾರತದ ರಫೆಲ್ ಜೆಟ್ ಗಳು ಪಾಕಿಸ್ತಾನದ 9 ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿವೆ. ದಾಳಿಯನ್ನು ಹ್ಯಾಮರ್ ಬಾಂಬ್ ಗಳನ್ನು ಕೂಡ ಬಳಸಲಾಗಿದೆ. ಜೈಶ್ ಎ ಮೊಹಮ್ಮದ್, ಲಷ್ಕರ್ ನಾಯಕರನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದ್ದು, ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಪರೇಶನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಇಂದು ಬೆಳಿಗ್ಗೆ 10ಗಂಟೆಗೆ ರಕ್ಷಣಾ ಸಚಿವಾಲಯ ಸುದ್ದಿಗೋಷ್ಠಿ ನಡೆಸಲಿದೆ.

Related Articles

Back to top button