Kannada NewsKarnataka NewsLatest

*ಇಂದಿನಿಂದ ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆಡೆಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ ಕ್ರಿಸ್ ಮಸ್ ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುವವರು ಕೊಂಚ ಈ ಬಗ್ಗೆ ಗಮನಹರಿಸಬೇಕು. ಇಂದಿನಿಂದ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿ ಆರಂಭವಾಗಿದ್ದು, ಸಾವಿರಾರು ದತ್ತಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಇಂದಿನಿಂದ ಡಿಸೆಂಬರ್ 27ರ ವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ ಸೇರಿದಂತೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳು ಬಂದ್ ಆಗಲಿವೆ.

Home add -Advt

ದತ್ತಪೀಠದಲ್ಲಿ ಡಿಸೆಂಬರ್ 24, 25 ಹಾಗೂ 26ರಂದು ದತ್ತ ಜಯಂತಿ ಅಂಗವಾಗಿ ಅಂದು ವಿಶೇಷ ಪೂಜೆ, ಹೋಮ-ಹವನಗಳು ನಡೆಯಲಿವೆ. ಡಿ.26ರಂದು ದತ್ತಪೀಠಕ್ಕೆ 20,000ಕ್ಕೂ ಹೆಚ್ಚು ದತ್ತಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದ್ದು, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ದತ್ತಪೀಠದ ಅರ್ಚಕರು ಸೇರಿದಂತೆ ಐವರಿಗೆ ಅಂಗರಕ್ಷಕರನ್ನು ಪೊಲೀಸ್ ಇಲಖೆ ನೇಮಕ ಮಾಡಿದೆ.


Related Articles

Back to top button