Belagavi NewsBelgaum NewsKannada NewsKarnataka NewsLatest

*ತೀವ್ರಗೊಂಡ ಕಾವೇರಿ ಹೋರಾಟ: ಬೆಳಗಾವಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಮೇಲೆ ಹತ್ತಿ ಕರವೇ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತಮಿಳುನಾಡಿಗೆ ನೀರುಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿದ್ದು, ಬೆಳಗಾವಿ ಜಿಲ್ಲೆಯಲ್ಲಿಯೂ ಕರವೇ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ.

ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕರವೇ ಕಾರ್ಯಕರ್ತರು ಪೆಟ್ರೋಲ್ ಟ್ಯಾಂಕರ್ ಮೇಲೆ ಹತ್ತಿ ಪ್ರತಿಭಟಿಸಿದರು.

Home add -Advt

ಇದೇ ವೇಳೆ ಲಾರಿ ಕೆಳಗೆ ಮಲಗಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಕಾವೇರಿ ನೀರಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದೆ.


Related Articles

Back to top button