Kannada NewsLatest

*ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮತ್ತೋರ್ವ ಸಂತ್ರಸ್ತೆಯಿಂದ ಹೇಳಿಕೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಎಸ್ಐಟಿ ಅಧಿಕಾರಿಗಳ ಮುಂದೆ ಮತ್ತೋರ್ವ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ.

Home add -Advt

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಸಂತ್ರಸ್ತರ ನೆರವಿಗಾಗಿ, ಕಾನೂನಾತ್ಮಕ ರಕ್ಷಣೆ ನಿಟ್ಟಿನಲ್ಲಿ ಸಹಾಯವಾಣಿ ತೆರೆದಿದ್ದಾರೆ. ಈ ನಡಿವೆ ಮತ್ತೋರ್ವ ಸಂತ್ರಸ್ತೆ ಎಸ್ಐಟಿ ಎದುರು ಹೇಳಿಕೆ ನೀಡಿದ್ದು, ಪ್ರಜ್ವಲ್ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾಳೆ.

ಹೊಳೆನರಸಿಪುರದಲ್ಲಿರುವ ರೇವಣ್ಣ ನಿವಾಸದಲ್ಲಿ ಪ್ರಜ್ವಲ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಹೇಳಿಕೆ ದಾಖಲಿಸಿದ್ದಾಲೆ. ಸಂತ್ರಸ್ತೆ ಹೇಳಿಕೆ ಹಿನ್ನೆಲೆಯಲ್ಲಿ ಎಸ್ಐಟಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ.

Related Articles

Back to top button