Latest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದೆ. ಇನ್ನೂ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಯಾದಗಿರಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಲಿದೆ.

ರಾಜ್ಯದಲ್ಲಿ ಜುಲೈ 24ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಚಾಮರಾಜನಗರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Related Articles

Back to top button