Karnataka News

*ಮತ್ತೆ ಮಳೆ ಮುನ್ಸೂಚನೆ: ಎಲ್ಲೆಲ್ಲಿ?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೆಲ ದಿನಗಳಿಂದ ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ ಹಲವೆಡೆ ಒಣಹವೆ ಆರಂಭವಾಗಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ನವೆಂಬರ್ 14ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಗದಗ, ಬಾಗಲಕೋಟೆ, ಬೀದರ್, ಧಾರವಾಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.


Related Articles

Back to top button