Kannada NewsKarnataka NewsLatestNationalPolitics

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು 

ಪ್ರಗತಿವಾಹಿನಿ ಸುದ್ದಿ: ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮೇ 10ರಂದು, ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆನಂತರ ಜೂನ್ 2 ರಂದು ಶರಣಾಗುವಂತೆ ಕೋರ್ಟ್ ಹೇಳಿತ್ತು. ಮಾರ್ಚ್ 21 ರಂದು ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಲಾಗಿತ್ತು.

ಆದರೆ ಇಂದು ಮತ್ತೆ ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇದರೊಂದಿಗೆ ಕೇಜ್ರಿವಾಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ರೋಸ್ ಅವೆನ್ಯೂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. 2021-22ರ ಅವಧಿಯ ಪ್ರಕರಣ ಇದಾಗಿದ್ದು, ಇದೀಗ ವಿಚಾರಣೆ ಆಲಿಸಿದ ನ್ಯಾ.ನಿಯಯ್ ಬಿಂದು ಅವರು ಈ ಆದೇಶವನ್ನು ನೀಡಿದ್ದಾರೆ. 

Home add -Advt

Related Articles

Back to top button