Karnataka NewsLatestPolitics

*ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ನ್ಯಾಯಾಲಯ ನಾಳೆಗೆ ಶಿಕ್ಷೆ ಪ್ರಮಾಣ ಕಾಯ್ದಿರಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳು ದೋಷಿಗಳೆಂದು ನಿನ್ನೆ ತೀರ್ಪು ಪ್ರಕಟಿಸಿದೆ. ಇಂದು ಶಿಕ್ಷೆ ಪ್ರಮಾಣದ ಬಗ್ಗೆ ವಾದಮಂಡನೆಗೆ ಅವಕಾಶ ನೀಡಿತ್ತು.

Home add -Advt

ಈ ವೇಳೆ ನ್ಯಾಯಾಲಯ ಅಪರಾಧಿಗಳ ಪರ ವಕೀಲರ ವಾದ ಮಂಡನೆ ಆಲಿಸಿದ್ದು, ಈ ವೇಳೆ ವಿನಯ್ ಕುಲಕರ್ಣಿ ಪರ ವಕೀಲರು, ಅಪರಾಧಿಗೆ ಮೂವರು ಮಕ್ಕಳಿದ್ದಾರೆ. ಇಬ್ಬರು ಹೆಣ್ಣುಮಕ್ಕಳ ಮದುವೆ ಜವಾಬ್ದಾರಿ ಇದೆ. ಹಾಗಾಗಿ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ.

ವಾದ-ಪ್ರತಿವಾದ ಆಲಿಸ್ದ ನ್ಯಾಯಾಲಯ ಶಿಕ್ಷೆ ಪ್ರಮಾಣ ಕುರಿತ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ಶಸಾಕ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.


Related Articles

Back to top button