Karnataka News

*ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಅಂಡ್ ಗ್ಯಾಂಗ್ ಭೀಕರವಾಗಿ ಕೊಲೆಗೈದಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪತ್ನಿ ಇಂದು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. 

ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಅಪಹರಿಸಿ ಪಟ್ಟಣಗೆರೆ ಶೆಡ್ ನಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ರೇಣುಕಾಸ್ವಾಮಿ ಮೃತಪಟ್ಟಾಗ ಸಹನಾ ಗರ್ಭಿಣಿಯಾಗಿದ್ದರು. ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಿ ಜೈಲಿಗೆ ತಳ್ಳಿದ್ದರು.

Related Articles

Back to top button