Karnataka News
*ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಮಹಿಳೆ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆಯೊಬ್ಬರು ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ನಡೆದಿದೆ.
50 ವರ್ಷದ ಮಂಜಮ್ಮ ಮೃತ ಮಹಿಳೆ. ಮನೆ ಬಳಿ ನಿಂತಿದ್ದ ಮಂಜಮ್ಮ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘೋರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



