Belagavi NewsBelgaum NewsKannada NewsKarnataka NewsLatestPolitics
*ವಿಪಕ್ಷಗಳು ಏನೆ ಚರ್ಚೆ ಮಾಡಿದರೂ ಉತ್ತರಿಸಲು ಸಿದ್ಧ; ಸಿಎಂ ಸಿದ್ದರಾಮಯ್ಯ*


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ವಿಪಕ್ಷದಾರ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಇಂದಿನಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು 6 ತಿಂಗಳು ವಿಪಕ್ಷನಯಾಕನ ಆಯ್ಕೆ ಮಾಡಿರಲಿಲ್ಲ. ಬಿಜೆಪಿಯವರು ನಮ್ಮ ಬಗ್ಗೆ ಏನು ಮಾತಾಡ್ತಾರೆ? ಎಂದು ಪ್ರಶ್ನಿಸಿದರು.
ವಿಪಕ್ಷದವರು ಯಾವುದೇ ಚರ್ಚೆ ಮಾಡಿದರೂ, ಪ್ರಶ್ನೆ ಕ್ಕೇಳಿದರು ಸದನದಲ್ಲಿ ಉತ್ತರಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.