LatestNationalPolitics

*ಪರೀಕ್ಷಾ ಅಕ್ರಮ: ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ 10 ಕೋಟಿ ರೂ ದಂಡ*

ಪ್ರಗತಿವಾಹಿನಿ ಸುದ್ದಿ: ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, “ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024” ಅನ್ನು ಜಾರಿಗೆ ತಂದಿದೆ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ‘ಈ ಕಾಯ್ದೆಯಡಿ, ಅಕ್ರಮ ಎಸಗುವವರಿಗೆ ನೀಡಲಾಗುತ್ತಿದ್ದ ಶಿಕ್ಷೆಯನ್ನು 5 ವರ್ಷಗಳಿಂದ 10 ವರ್ಷಕ್ಕೆ ಹೆಚ್ಚಿಸಲಾಗಿದೆ ಮತ್ತು 10 ಕೋಟಿ ರೂ ದಂಡವನ್ನು ವಿಧಿಸಲಾಗುತ್ತದೆ. ಹಿಂದೆ ಇಂಥ ಘಟನೆ ಆದಾಗ ಗಂಭೀರ ಕ್ರಮ ಕೈಗೊಂಡಿರಲಿಲ್ಲ. ಹಿಂದೆ 58 ಬಾರಿ UPSC ಪರೀಕ್ಷೆಯ ಪತ್ರಿಕೆ ಲೀಕ್ ಆಗಿದ್ದವು. ಅವುಗಳ ಬಗ್ಗೆ ನಾವು ಮಾತನಾಡುವುದಿಲ್ಲ ಎಂದರು.

Home add -Advt

ಯಾರು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೋ ಅವರನ್ನ ಬಂಧಿಸಲಾಗಿದೆ. ಅವರ ಮೇಲೆ ಜಾಮೀನುರಹಿತ ಕೇಸ್ ದಾಖಲಾಗಿದೆ. 22 ಲಕ್ಷ ವಿದ್ಯಾರ್ಥಿಗಳಿಗೆ ಮರು ನೀಟ್ ಪರೀಕ್ಷೆ ಮಾಡಲಾಗಿದೆ. ನೀಟ್ ವಿಚಾರದಲ್ಲಿ ಕೇಂದ್ರ ಸರ್ಕಾರ ಬಹಳ ಗಂಭೀರವಾಗಿದೆ’ ಎಂದು ತಿಳಿಸಿದರು.


Related Articles

Back to top button