Belagavi NewsKannada NewsKarnataka News

*ರಾಜ್ಯದ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು  ಹವಾಮಾನ ಇಲಾಖೆಯು ಸೂಚನೆ ನೀಡಿದೆ.

ಮುಂದಿನ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದ್ದು, ರಾಜ್ಯದ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ಮುಂದಿನ ಮೂರು ದಿನ ವಿಶೇಷವಾಗಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿಯೂ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ. ತಗ್ಗಿನ ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದ್ದು, ಹಲವೆಡೆ ಕೃಷಿ ಚಟುವಟಿಕೆಗಳ ಮೇಲೆಯೂ ಮಳೆಯ ಪ್ರಭಾವ ಬೀರಲಿದೆ.

Related Articles

Back to top button