Latest

*ಕಾಲ್ತುಳಿತ ಪ್ರಕರಣ: ಬಂಧಿತ ಆರೋಪಿಗಳು ಜೈಲುಪಾಲು*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರ್ ಸಿಬಿ ಸಿಬ್ಬಂದಿ ಜೈಲುಪಾಲಾಗಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಆರ್ ಸಿಬಿ ಮ್ಯಾನೇಜ್ಮೆಂಟ್ ನ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್ ಎ ಕಂಪನಿ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಬೆಂಗಳೂರಿನ 41ನೇ ಎಸಿಜೆ ಎಂ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೂನ್ 19ರವರೆಗೆ ನ್ಯಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button