Politics

*ಇಂತಹ ಅನಾಗರೀಕ ವರ್ತನೆಯನ್ನು ಸರ್ಕಾರ ಸಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ*

ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿತ ಪ್ರಕರಣ

Home add -Advt

ಪ್ರಗತಿವಾಹಿನಿ ಸುದ್ದಿ: ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ ಎಂದು ಘಟನೆಯನ್ನು ಖಂಡಿಸಿದ್ದಾರೆ.

ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.

ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.


Related Articles

Back to top button