
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24ಗಂಟೆಯಲ್ಲಿ ದೇಶದಲ್ಲಿ ಸೋಂಕು ದಾಖಲೆಯ ಪ್ರಮಾಣದಲ್ಲಿ ಹೆಚ್ಚಿದೆ. ಒಂದೇ ದಿನದಲ್ಲಿ 64,531 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 27,67,274ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ ದೇಶದಲ್ಲಿ 1,092 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ 52,889 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
ಸದ್ಯ 6,76,514 ಸಕ್ರಿಯ ಪ್ರಕರಣಗಳಿದ್ದು, 20,37,871 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ಇನ್ನು ಆಗಸ್ಟ್ 18ರಂದು 8,01,518 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಐಸಿಎಂಆರ್ ಪ್ರಕಾರ ದೇಶದ 3,17,42,782 ಜನರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.