Kannada NewsKarnataka News

*ಒಂದೆ ಮರಕ್ಕೆ ನೇಣು ಬಿಗಿದು ಪ್ರೇಮಿಗಳಿಬ್ಬರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ :ಒಂದೆ ಮರಕ್ಕೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ.

ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದ ನಿವಾಸಿಗಳಾದ ಸಚಿನ್ ಭೀಮಪ್ಪ ದಳವಾಯಿ(22), ಪ್ರೀಯಾ ಮಲ್ಲಪ್ಪ ಮಡಿವಾಳ (19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ನಾಗರಪಂಚಮಿ ದಿನವೇ ಆತ್ಮ ಮಾಡಿಕೊಂಡಿದ್ದಾರೆ. 

Home add -Advt

ಯುವಕ, ಯುವತಿ ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಾಗ ಗ್ರಾಮದ ಹಿರಿಯರು ಇಬ್ಬರಿಗೂ ಬೈದು ಬುದ್ದಿವಾದ ಹೇಳಿದ್ದರು ಎಂದು ತಿಳಿದು ಬಂದಿದೆ. ಶುಕ್ರವಾರ ಮುಂಜಾನೆ ಏಕಾಏಕಿ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಿಂಗಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related Articles

Back to top button