
ಪ್ರಗತಿವಾಹಿನಿ ಸುದ್ದಿ, ಅಥಣಿ: ನ್ಯಾಯಾಧೀಶರೊಬ್ಬರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಥಣಿ ನ್ಯಾಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.
ನ್ಯಾಯಾಲಯದ ಕಟ್ಟಡವನ್ನು ಸ್ಯಾನಿಟೈಜ್ ಮಾಡಲಾಗಿದೆ, ಮುಂದಿನ ಸೋಮವಾರದವರೆಗೆ ಸೀಲ್‌ಡೌನ್ ಮುಂದುವರಿಯುವ ಸಾಧ್ಯತೆ ಇದೆ ಎಂಬ ಮಾಹಿತಿಯಿದೆ. ಅಥಣಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ರಾಜ್ಯ ಸರ್ಕಾರಿ ದಾಖಲೆಗಳ ಪ್ರಕಾರ ಇದುವರೆಗೆ ೩೦೦ ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ೧೫ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಆದರೆ, ಮಹಾರಾಷ್ಟ್ರದಲ್ಲಿ ತಪಾಸಣೆಗೆ ಒಳಗಾಗಿ ಸೋಂಕು ಪತ್ತೆಯಾಗಿರುವ ಮಂದಿ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅವುಗಳ ಲೆಕ್ಕ ರಾಜ್ಯ ಸರ್ಕಾರದ ಲೆಕ್ಕದಲ್ಲಿ ಸೇರಿಕೊಂಡಿಲ್ಲ.
ಮಹಾರಾಷ್ಟ್ರದಲ್ಲಿ ಮೃತಪಟ್ಟ ಅಥಣಿ ತಾಲೂಕಿನ ಸಂಖ್ಯೆ ೧೫ಕ್ಕೂ ಹೆಚ್ಚು ಇದೆ. ಅವರ ಅಂತ್ಯಕ್ರಿಯೆಯನ್ನು ಅಲ್ಲಿಯೇ ಮುಗಿಸಲಾಗಿದೆ.
ಪ್ರತಿದಿನವೂ ಅಥಣಿ ಪಟ್ಟಣ ಮತ್ತು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.