ಮತ್ತೆ ರಮೇಶ ಜಾರಕಿಹೊಳಿ ಮಂತ್ರಿ ಮಾಡಿ; 20 ಶಾಸಕರಿಂದ ಸಿಎಂ ಭೇಟಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವಸ್ಥಾನಕ್ಕೆ ರಾಜಿನಾಮೆ ನೀಡಿರುವ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಲು 20 ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಶಾಸಕ ಮಹೇಶ ಕುಮಟಳ್ಳಿ ಸೇರಿದಂತೆ 20 ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಒಂದೊಮ್ಮೆ ರಮೇಶ ಜಾರಕಿಹೊಳಿ ಅವರನ್ನು ಸೇರಿಸಿಕೊಳ್ಳಲು ಸಾಧ್ಯವಾಗದಿದ್ದರೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಮಂತ್ರಿ ಮಾಡುವಂತೆ ಕೋರಿದ್ದಾರೆ.
ರಾಸಲೀಲೆ ಪ್ರಕರಣದ ವಿಟೀಯೋ ಹೊರಬೀಳುತ್ತಿದ್ದಂತೆ ಪಕ್ಷಕ್ಕೆ ಮುಜುಗರವಾಗಬಾರದೆನ್ನುವ ಕಾರಣಕ್ಕೆ ರಮೇಶ ಜಾರಕಿಹೊಳಿ ಸಚಿವಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ನಾಳೆ ಬೆಳಗ್ಗೆ 9.30ಕ್ಕೆ ರಮೇಶ ಜಾರಕಿಹೊಳಿ ಬೆಂಗಳೂರು ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ನಾಳೆ ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿ
ಸಿಡಿ ಪ್ರಕರಣ: ರಮೇಶ್ ಕೈ ಬಿಟ್ಟು ಬಾಲಚಂದ್ರ ಜಾರಕಿಹೊಳಿಗೆ ಮಂತ್ರಿಸ್ಥಾನ?




