Belagavi NewsBelgaum NewsKannada NewsKarnataka News

*ಜುಲೈ 26 ರಂದು ಕಾರ್ಗಿಲ್ ವಿಜಯೋತ್ಸವ ಆಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 25ನೇ ಕಾರ್ಗಿಲ್ ವಿಜಯೋತ್ಸವವನ್ನು‌ ಇದೆ 26 ರಂದು ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಆಚರಿಸಲಾಗುವುದು ಎಂದು ಮಾಜಿ ಸೈನಿಕರ ಮಹಾ ಒಕ್ಕೂಟದ ಆದ್ಯಕ್ಷ ಜಗದೀಶ್ ಪೂಜೇರಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ ಕ್ಲಬ್ ಆಫ್ ಬೆಳಗಾವಿ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕದ ಸಹಯೋಗದಲ್ಲಿ ಜುಲೈ 26 ರಂದು ಬೆಳಗ್ಗೆ ನಗರದ ಕಿಲ್ಲಾ ಕೋಟೆಯ ಮುಂಭಾಗದಿಂದ ಬೈಕ್ ರ್ಯಾಲಿ ಆರಂಭವಾಗಿ ಸಂಗೊಳ್ಳಿ ರಾಯಣ್ಣನ‌ ವೃತ್ತದ ಮಾರ್ಗವಾಗಿ ಕುಮಾರ ಗಂಧರ್ವ ರಂಗ ಮಂದಿರಕ್ಕೆ ಸಮಾಪ್ತಿಯಾಗುವುದು ಎಂದರು.

ಕಾರ್ಗಿಲ್ ವಿಜಯೋತ್ಸವದ ಸಂಭ್ರಮಾಚರಣೆಯಲ್ಲಿ ವೀರ ಮರಣ ಹೊಂದಿದ ಸೈನಿಕರ ಕುಟುಂಬಕ್ಕೆ ಸನ್ಮಾನ ಹಾಗೂ ಪ್ರತಿಭಾವಂತ ಸೈನಿಕ ಮಕ್ಕಳಿಗೆ ಪುರಸ್ಕಾರ ಸಮಾರಂಭ ನಡೆಯಲಿದೆ ಎಂದರು.

ರೋಟರಿ ಕ್ಲಬ್ ಆಫ್ ಬೆಳಗಾವಿಯ ವಿನಯಕುಮಾರ ಬಾಳಿಕಾಯಿ, ರಮೇಶ ಬಾಗೇವಾಡಿ, ಬಿ.ಜೆ.ವಾಲಿ, ಪ್ರಕಾಶ ದೇಯನ್ನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Home add -Advt

Related Articles

Back to top button